ಇತರ ಹಿಂದುಳಿದ ಜಾತಿಯವರಿಗೆ ವಿದ್ಯಾಸಂಸ್ಥೆಗಳಲ್ಲಿ ೨೭% ಮೀಸಲಾತಿ ನೀಡುವಂತಹ ಕಾನೂನನ್ನು ಎತ್ತಿಹಿಡಿದ ಸರ್ವೋಚ್ಚ ನ್ಯಾಯಾಲಯದ ತೀರ್ಪು ಬರುತ್ತಿದ್ದಂತೆಯೇ ಸಮಾನತೆ, ಗುಣಮಟ್ಟ ಇತ್ಯಾದಿಯ ಬಗೆಗಿನ ಚರ್ಚೆ ಮತ್ತೆ ಆರಂಭವಾಗಿದೆ. ಈ ಚರ್ಚೆಗೆ ಒಂದು ಸ್ಪಷ್ಟ ಉತ್ತರ ಸಿಗುವುದಾಗಿದ್ದರೆ ಇಷ್ಟು ಗೊಂದಲಮಯ ವಸ್ತುವೇ ಆಗುತ್ತಿರಲ್ಲ. ಇದರಿಂದಾಗಿ ಒ.ಬಿ.ಸಿಗಳಿಗೆ ಒಳಿತಾಗುವುದೇ? ಮೇಲ್ವರ್ಗದವರ ಅವಕಾಶಗಳು ಕಡಿಮೆಯಾಗುವುದೇ? ಎಲ್ಲರನ್ನೂ ಸಮಾನ ಮಾನದಂಡದ ಮೇಲೆ ಅಳೆಯುತ್ತಿದ್ದ ಸಿದ್ಧಾಂತಕ್ಕೆ ಧಕ್ಕೆ ಬಂದಿದೆಯೇ? ಈ ಎಲ್ಲ ಪ್ರಶ್ನೆಗಳೂ ಉದ್ಭವಿಸುತ್ತವೆ. ಜಟಿಲವಾದ ಈ ವಿಷಯದ ನಿರಚನೆ ಅಷ್ಟೇ ಜಟಿಲವಾದದ್ದು.
ಸರ್ವರಿಗೂ ಸಮಬಾಳು ಅನ್ನುವ ಮಾತು ಎಂದಿಗಾದರೂ ನಿಜವಾಗಲು ಸಾಧ್ಯವೇ?
No comments:
Post a Comment