ಕಂದೀಲಿನ ಮೇಲೆ ಧೂಳು!

ಗುಜರಾತ್ ಸರಕಾರ ವಿಕಾಸದ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ. ಅದರ ಬಗ್ಗೆ ಹೆಚ್ಚಿನ ಚರ್ಚೆ ರಾಜ್ಯದ ಆಚೆ ಹೆಚ್ಚಾಗಿ ನಡೆಯುವುದಿಲ್ಲ. ಗುಜರಾತಿನ ಬಗ್ಗೆ ಹೊರಗೆ ಚರ್ಚೆ ನಡೆಯುವಾಗ ಎರಡು ಮುಖ್ಯ ವಿಚಾರಗಳು ಚರ್ಚಿತಗೊಳ್ಳುತ್ತವೆ. ಮೊದಲನೆಯ ಮತ್ತು ಅತಿ ಮುಖ್ಯ ವಿಷಯ ಗೋಧ್ರಾ ಮತ್ತು ತದನಂತರದ ಹತ್ಯಾಕಾಂಡ. ಆ ಬಗ್ಗೆ, ಅದರಲ್ಲಿ ಸರಕಾರದ ಪಾತ್ರದ ಬಗ್ಗೆ, ಪೋಲೀಸರ ಪಾತ್ರದ ಬಗ್ಗೆ ಎಷ್ಟೋ ಚರ್ಚೆ ನಡೆದಿದೆ. ಅದೇ ಸಮಯಕ್ಕೆ ಗುಜರಾತಿನಲ್ಲಿನ ವಿಕಾಸದ ಬಗೆಗಿನ ವಿಚಾರಗಳು ಹೊರಕ್ಕೆ ಬರುವುದೇ ಇಲ್ಲ. ಇಲ್ಲಿ ಜನ ಸುಖವಾಗಿದ್ದಾರೆಯೇ? ಒಂದು ಕೋಮಿನವರು ಭಯಭೀತಿಯಿಂದ ಜೀವಿಸುತ್ತಿದ್ದಾರೆಯೇ? ಇಲ್ಲಿ ರಾಕ್ಷಸತ್ವ ಕಾಣಿಸುತ್ತದೆಯೇ? ಈ ಎಲ್ಲಕ್ಕೂ ಸರಳವಾದ ಉತ್ತರಗಳನ್ನು ಕೊಡುವುದಕ್ಕೆ ಸಾಧ್ಯವಿಲ್ಲ. ಗುಜರಾತಿನ ವಿಷಯಕ್ಕೆ ಬಂದಾಗ ಚರ್ಚೆಗೊಳಗಾಗುವ ಮತ್ತೊಂದು ವಿಚಾರ ನರ್ಮದಾ, ಅಣೆಕಟ್ಟು, ನೀರು, ಮೇಧಾ ಮತ್ತು ಅದಕ್ಕೆ ಸಂಬಂಧಿಸಿದ ವಿವಾದದ್ದು.




No comments: