ರಾಮ್ ಗುಹಾ ಬರೆದ ಕ್ರಿಕೆಟ್ ರಾಜ್ಯ

ಈ ಬಾರಿ ರಾಮ್ ಗುಹಾ ಜೊತೆಗೆ ಮತಷ್ಟು ಸಮಯ ಕಳೆಯಲಿದ್ದೇನೆ; ನನ್ನ ಬಾಲ್ಯದ ಕ್ರಿಕೆಟ್ಟಿಗೆ ಪಯಣ ಮಾಡಲಿದ್ದೇನೆ. ಇತ್ತೀಚೆಗೆ ನಾನು ಓದಿದ ಪುಸ್ತಕಗಳಲ್ಲಿ ರಾಮ್ ಗುಹಾರ ಕ್ರಿಕೆಟ್ಟಿನ ಬಗೆಗಿನ ಪುಸ್ತಕವೂ ಒಂದು. ರಾಮ್ ಗುಹಾರ ಅನೇಕ ಬರವಣಿಗೆಗಳನ್ನು ನಾನು ಓದಿದ್ದೇನೆ, ಹಾಗೂ ಅವುಗಳನ್ನು ಇಷ್ಟಪಟ್ಟಿದ್ದೇನೆ. ವರಿಯರ್ ಎಲ್ವಿನ್ ಅವರ ಜೀವನ ಚರಿತ್ರೆ ರಾಮ್ ಅವರ ಅದ್ಭುತವಾದ ಸಂಶೋಧನಾ ಪ್ರತಿಭೆಯನ್ನು ತೋರುವ ಪುಸ್ತಕ. ರಾಮ್ ಒಳ್ಳೆಯ ಲೇಖಕರಷ್ಟೇ ಅಲ್ಲ, ಬರೇ ಬರವಣಿಗೆಯ ಆಧಾರದ ಮೇಲೆಯೇ ಜೀವನವನ್ನು ನಡೆಸುತ್ತಿರುವ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರು. ರಾಮ್ ಅವರ ಬರವಣಿಗೆಯನ್ನು ಶ್ರೇಣೀಕರಿಸುವುದು ಕಷ್ಟದ ಮಾತು.No comments: