ಸ್ಲಂಡಾಗ್/ವೈಟ್ ಟೈಗರ್: ಸಂಭ್ರಮದ ನಡುವೆ ನೈತಿಕ ನಿಲುವಿನ ಕೆಲವು ಪ್ರಶ್ನೆಗಳು.

ಸ್ಲಂಡಾಗ್ ಮಿಲಿಯನೇರ್ ಮತ್ತು ಅರವಿಂದ ಅಡಿಗರ ಪುಸ್ತಕಗಳಿಗೆ ಅನಿರೀಕ್ಷಿತವಾದ ಪ್ರಚಾರ ಸಿಕ್ಕು ಎಲ್ಲೆಡೆ ಅದರ ಚರ್ಚೆಯಾಗುತ್ತಿರುವುದು ಒಳ್ಳೆಯ ಸಂಕೇತವೇ. ಈ ಎರಡೂ ಕೃತಿಗಳು ಜಗತ್ತಿನ ಸದಭಿರುಚಿಯ ಸಂಕೇತವೇ ಅನ್ನುವ ಪ್ರಶ್ನೆಗಳನ್ನು ಎಬ್ಬಿಸಿವೆ. ನಾನು ಈವರೆಗೂ ಮಾತನಾಡಿರುವ ಅನೇಕ ಜನರು ಇಲ್ಲವೇ ಈ ಎರಡೂ ಕೃತಿಗಳನ್ನು ಮೆಚ್ಚಿದ್ದಾರೆ, ಇಲ್ಲವೇ ಎರಡನ್ನೂ ಸಹಿಸಿಲ್ಲ. ಎರಡೂ ಕೃತಿಗಳ ಬಗ್ಗೆ ನನ್ನ ತಕರಾರನ್ನು ಚರ್ಚೆಗೆ ಹಚ್ಚಬೇಕಾದ್ದು ಮುಖ್ಯ. ಯಾಕೆಂದರೆ ಈ ಎರಡೂ ಕೃತಿಗಳು ಹಾಗೂ ಅವುಗಳಿಗೆ ದೊರಕಿರುವ ಮನ್ನಣೆ ನಾವು ಈ ವರ್ಷದಲ್ಲಿ ಸೃಜನಶೀಲತೆಯನ್ನು ಯಾವ ಮಾಪನದಲ್ಲಿ ನೋಡುತ್ತಿದ್ದೇವೆ ಅನ್ನುವ ಪ್ರಶ್ನೆಯನ್ನು ಎಬ್ಬಿಸುತ್ತವೆ.





No comments: