ಈಗೀಗ ಎಲ್ಲ ನಗರಗಳಲ್ಲೂ ’ಹೆರಿಟೇಜ್ ವಾಕ್’ ಆಯೋಜನೆ ಪ್ರಾರಂಭವಾಗಿದೆ. ನಗರದ ಹಿನ್ನೆಲೆ ಚರಿತ್ರೆ ತಿಳಿಯಲು ಇದೊಂದು ಒಳ್ಳೆಯ ಮಾರ್ಗ. ಅನೇಕ ವರ್ಷಗಳಿಂದ ಅಹಮದಾಬಾದಿನಲ್ಲಿ ಮುನಿಸಿಪಲ್ ಕಾರ್ಪೋರೇಶನ್ ನಡೆಸುತ್ತಿರುವ ಹೆರಿಟೇಜ್ ವಾಕ್ ಪ್ರಸಿದ್ಧವಾಗಿದೆ. ಮುಂಜಾನೆ ಏಳೂವರೆಗೆ ಪ್ರಾರಂಭವಾಗುವ ಈ ನಡಿಗೆ ಸುಮಾರು ಎರಡು ಘಂಟೆಕಾಲ, ನಿಧಾನಗತಿಯಲ್ಲಿ ಹಳೆಯ ಕಟ್ಟಡಗಳು, ಮನೆ ಮತ್ತು ಮಂದಿರಗಳನ್ನು ತೋರಿಸುತ್ತದೆ. ನಮ್ಮ ಹಿಂದಿನ ತಲೆಮಾರಿನವರು ತೋರಿದ ಕ್ರಿಯಾಶೀಲತೆ ಮತ್ತು ಸೃಜನಶೀಲತೆಯನ್ನು ಅರಿಯಲು ಇದು ಒಂದು ಉತ್ತಮ ವಿಧಾನ.
ಮಹಾತ್ಮಾ ಗಾಂಧಿ ಮತ್ತು ಮಾ ಬ್ಲಾ ಪೆನ್ನು
1 week ago
0 ಟಿಪ್ಪಣಿಗಳು:
Post a Comment