ವೈಟ್ ಹೊಟೇಲ್: ಕೋಣೆಗೊಬ್ಬ ಕಲಾವಿದ - ಕಲಾವಿದನಿಗೊಂದು ಕೋಣೆ.

ಛಳಿಗಾಲದಲ್ಲಿ ನಡುಗಾಡುತ್ತಾ ಇಲ್ಲಿಗೆ ಬಂದು ಪಾಠಮಾಡುವುದು ಗಮ್ಮತ್ತಿನ ವಿಷಯವೇನೂ ಅಲ್ಲ. ಭಾಷೆ ಬಾರದ, ಊಟ ಒಗ್ಗದ, ಈ ಜಾಗದಲ್ಲಿ ನಾನು ಅನಕ್ಷರಸ್ಥ - ಬರೇ ಫ್ರೆಂಚ್ ಮತ್ತು ಫ್ಲೆಮಿಷ್ ಮಾತನಾಡುವ ಈ ಬಹುಭಾಷಾ ನಗರದಲ್ಲಿ ನಾನು ಇಳಿದಾಗಲೆಲ್ಲಾ ಒಂದೊಂದು ಹೆಜ್ಜೆಗೂ ಜನರನ್ನು ಮುಂದಿನ ಅಡಿ ಎಲ್ಲಿಡಬೇಕೆಂದು ಕೇಳಿಕೊಳ್ಳುತ್ತಾ ನಡೆಯಬೇಕು. ನಕ್ಷೆಗಳನ್ನು ನೋಡಿ ಓಡಾಡುವ ಜನರ ಮಧ್ಯೆ ಮತ್ತೆ ಮತ್ತೆ ದಾರಿ ಕೇಳುವ ವಿಚಿತ್ರಕ್ಕಿಳಿಯಬೇಕು. ಹಲವು ಬಾರಿ ನಕ್ಷೆಗಳೂ ಅವರ ಭಾಷೆಯಲ್ಲೇ ಇರುತ್ತವೆ. ಹೋಗಲಿ ಕಂಪ್ಯೂಟರನ್ನು ತಗೆದು ಗೂಗಲ್ ಭಗವಾನನ ಮೊರೆ ಹೋಗಬೇಕೆಂದರೆ ಆತನೂ ಸ್ಥಳೀಯ ಭಾಷೆಯನ್ನು ಬಿಟ್ಟು ಆಂಗ್ಲಕ್ಕೆ ಬರಲು ಸಮಯ ತೆಗೆದುಕೊಳ್ಳುತ್ತಾನೆ. ಹೀಗೆ ೨೪ ರಾಷ್ಟ್ರಗಳ ಪ್ರತಿನಿಧಿಸುವ ವಿದ್ಯಾರ್ಥಿವೃಂದಕ್ಕೆ ಭಾರತೀಯ ಮೈಕ್ರೊಫೈನಾನ್ಸ್ ಬಗ್ಗೆ ಲೆಕ್ಚರುಗಳನ್ನು ಕುಟ್ಟುವುದು ಸುಲಭವಲ್ಲ. ಮೊದಲ ದಿನದಂದೇ ನಾನು ಕ್ಲಾಸಿಗೆ ಹೇಳಿಬಿಟ್ಟೆ.No comments: