ಎರಡು ವರ್ಷಗಳ ನಂತರ... ಮುಚ್ಚಿದ ಪ್ರೀಮಿಯರ್

ವಿಸ್ತರಿಸಿಕೊಳ್ಳಲು ಸಹಾಯಕ ಕೋಚಿಂಗಿಗೆ ಹೋಗುತ್ತಿದ್ದಾಗ ಒಂದು ದಿನ ಅಲ್ಲಿ ಪಾಠ ಮಾಡುತ್ತಿದ್ದ ವಿಶ್ವನಾಥ್ ಹೇಳಿದ್ದರು: "ನಮ್ಮ ವಿತ್ತೀಯ ನಿರ್ಮತಿಯ ತಲ್ಲಣಗಳನ್ನು ಹೆಚ್ಚು ಅರ್ಥಮಾಡಿಕೊಳ್ಳಬೇಕಾದರೆ, ನೀನು ಶೂಮೇಕರನ ಸ್ಮಾಲ್ ಇಸ್ ಬ್ಯೂಟಿಫುಲ್ ಓದು. ನಾನು ಪ್ರೀಮಿಯರ್ ಬುಕ್ ಷಾಪಿನ ಶಾನ್‌ಭಾಗಿಗೆ ಹೇಳಿದ್ದೇನೆ. ನಮ್ಮವರಿಗೆ ಆತ ೧೫% ರಿಯಾಯಿತಿಯಲ್ಲಿ ಪುಸ್ತಕಗಳನ್ನು ಮಾರುತ್ತಾರೆ". ಹೀಗೆ ಸ್ಮಾಲ್ ಇಸ್ ಬ್ಯೂಟಿಫುಲ್ ಅನ್ನುವ ಪುಸ್ತಕವನ್ನು ಹುಡುಕಿ ಹೊರಟ ನನಗೆ ಆ ಪುಸ್ತಕದ ಟೈಟಲ್ಲಿನ ಅರ್ಥದ ಪದರ-ಮಜಲುಗಳು ಶಾನಭಾಗರ ಪ್ರೀಮಿಯರ್ ಬುಕ್ ಷಾಪ್ ನೋಡಿದಾಗ ತಟ್ಟಿತು. ಪುಟ್ಟ ಅಂಗಡಿಯಲ್ಲಿ ಎಷ್ಟೊಂದು ಭಂಡಾರವನ್ನು ಅಡಕಮಾಡಿ ಇಡಬಹುದು ಅನ್ನುವುದಕ್ಕೆ ಪ್ರೀಮಿಯರ್ ಸಂಕೇತವಾಯಿತು. ಆದರೆ ಅದನ್ನು ಬ್ಯೂಟಿಫುಲ್ ಎಂದು ಕರೆಯುವುದಕ್ಕೆ ಮಾತ್ರ ಸಾಧ್ಯವಾಗಿರಲಿಲ್ಲ. ಅದರ ಆತ್ಮ ಬ್ಯೂಟಿಫುಲ್ ಆದರೂ ಆ ಅಂಗಡಿಯಲ್ಲಿ ಪುಸ್ತಕಗಳನ್ನು ಆಯುವುದಕ್ಕೆ ಪಳಗಿದ ಕೈಗಳೇ  ಬೇಕಾಗಿದ್ದುವು.No comments: