ಗುಜರಾತಿನ ಕಛ್ ಪ್ರಾಂತದಲ್ಲಿ ಆದ ೨೦೦೧ರ ಭೂಕಂಪದ ಕಂಪನಗಳು ಈಗ್ಗೆ ಕಡಿಮೆಯಾಗುತ್ತಾ ಬಂದಿದೆಯೇನೋ. ಭೂಕಂಪವಾದ ನಂತರ ವಿಶ್ವದ ವಿವಿಧೆಡೆಗಳಿಂದ ಕಛ್ ಪ್ರಾಂತಕ್ಕೆ ಅನೇಕ ರೀತಿಯ ಅನುದಾನಗಳು ಬಂದುವು. ನಾನಾ ರೀತಿಯ ಸಂಸ್ಥೆಗಳು ಭೂಕಂಪದ ತಕ್ಷಣದ ದಿನಗಳಲ್ಲಿ ಆ ಜಿಲ್ಲೆಗೆ ಬಂದು ಗ್ರಾಮಗಳನ್ನು ದತ್ತು ತೆಗೆದು ಆ ಪ್ರಾಂತದ ಪುನರ್ನಿರ್ಮಾಣಕ್ಕೆ ಕೈಕೈ ಕೂಡಿಸಿದುವು. ಆದರೆ ಎಂಟು ವರ್ಷಗಳ ನಂತರ ಆ ಪ್ರಾಂತದ ಜನ ಹೇಗೆ ಜೀವಿಸುತ್ತಿದ್ದಾರೆ? ಭೂಕಂಪದಿಂದ ತತ್ತರಿಸಿದ ಹಲವು ಸಮುದಾಯಗಳು ಈಗ ಜೀವನ ಹೇಗೆ ನಡೆಸುತ್ತಿವೆ? ಈ ಎಲ್ಲ ಸಹಾಯ ಮತ್ತು ಒಳ್ಳೆಯತನದ ಫಲಿತವಾಗಿ ಏನಾದರೂ ಆಗಿದೆಯೇ ಅನ್ನುವುದು ಕುತೂಹಲದ ಮಾತು.
ಮ್ಯಾಗ್ಸಸೇ ಪ್ರಶಸ್ತಿ ಪಡೆದ ದೀಪ್ ಜೋಶಿ ಮತ್ತು ಅವರು ಬೆಳೆಸಿದ ಪ್ರದಾನ್ ಸಂಸ್ಥೆ
ಏಶಿಯಾದ ನೊಬೆಲ್ ಎಂದೇ ಪ್ರಖ್ಯಾತವಾಗಿರುವ ರ್‍ಯಾಮನ್ ಮ್ಯಾಗಸಸೇ ಪುರಸ್ಕಾರವನ್ನು ಈ ಬಾರಿ ಪಡೆದವರಲ್ಲಿ ಭಾರತೀಯ ದೀಪ್ ಜೋಶಿ ಸಹ ಸೇರಿದ್ದಾರೆ. ಎಂದೂ ತಮ್ಮ ಧ್ವನಿಯನ್ನು ಏರಿಸದ, ಬೆಳ್ಳಿಗಡ್ಡಧಾರಿ, ಒಂದು ಥರದಲ್ಲಿ ಋಷಿಯ ಅವತಾರದಂತಿರುವ ಹಿರಿಯ ದೀಪ್‍ಗೆ ಈ ಪುರಸ್ಕಾರ ಬಂದದ್ದು ಸಹಜವೂ ಸಮರ್ಪಕವೂ ಆಗಿದೆ. ಯಾವ ಆರ್ಭಟವೂ ಇಲ್ಲದೇ, ಎಲ್ಲವನ್ನೂ ಒಂದು ಸ್ಪಷ್ಟ ಆಲೋಚನೆ, ದೂರದರ್ಶಿತ್ವದಿಂದ ಯೋಜನಾಬದ್ಧವಾಗಿ ಕಾರ್ಯರೂಪಕ್ಕಿಳಿಸಿರುವ ದೀಪ್ ಒಂದು ರೀತಿಯಿಂದ ಅಜಾತ ಶತ್ರು. ಅವರ ಬಗ್ಗೆ ಕುಹಕದ ಧ್ವನಿಯಾಗಲೀ, ಬೇಸರದ ಧ್ವನಿಯಾಗಲೀ ನಾನು ಈ ವರೆಗೆ ಕೇಳಿಯೇ ಇಲ್ಲ. ಆದರೆ ದೀಪ್ ಜೋಶಿಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ನಾವು ಆತನ ಜೀವನದಲ್ಲಿ ಹಣಕಿಹಾಕದೇ ಆತನ ಕೆಲಸ ಮತ್ತು ಆತ ನಡೆಸಿದ ಸಂಸ್ಥೆಯ ನಿಲುವನ್ನು ಅರ್ಥಮಾಡಿಕೊಳ್ಳುವುದರಲ್ಲಿಯೇ ಮ್ಯಾಗಸಸೆಯ ಮಹತ್ವವೂ ಇದೆ.
© ಎಂ.ಎಸ್.ಶ್ರೀರಾಮ್ |
ವಿಷಯ ವೈವಿಧ್ಯ-
ದೀಪ್ ಜೋಶಿ,
ಪ್ರದಾನ್,
ಮ್ಯಾಗ್ಸಸೇ,
ವಿಜಯ್ ಮಹಾಜನ್,
ಶ್ರೀರಾಮ್
| Reactions: |
ಒಳಿತು ಮಾಡಿ ಲಾಭ ಗಳಿಸುವ ವ್ಯಾಪಾರ: ಮೂರು ಮಾದರಿಗಳು
ಕೆಲವು ವ್ಯಾಪಾರಗಳು ನಾವು ದಿನೇ ದಿನೇ ನೋಡುವ ವ್ಯಾಪಾರಗಳಿಗಿಂತ ಭಿನ್ನವಾಗಿರುತ್ತವೆ. ವ್ಯಾಪಾರದ ಉದ್ದೇಶವೇನೋ ಲಾಭ ಗಳಿಸುವುದು. ಆದರೆ ಲಾಭ ಗಳಿಸುವ ಪ್ರಕ್ರಿಯೆಯಲ್ಲಿ ಒಳಿತನ್ನೂ ಮಾಡಲು ಸಾಧ್ಯವಾದರೆ? ಅನೇಕ ಬಾರಿ ಈ ವ್ಯಾಪಾರಗಳ ಉದ್ದೇಶ ನಿಜಕ್ಕೂ ಒಳಿತನ್ನು ಮಾಡಬೇಕೆನ್ನುವುದೇ ಅಥವಾ ಒಳ್ಳೆಯ ಹೆಸರು ಬರಲಿ ಅನ್ನುವ ಸೀಮಿತ ಉದ್ದೇಶದಿಂದ ಇಂಥ ವ್ಯಾಪಾರವನ್ನು ಮಾಡುತ್ತಿದ್ದಾರೆಯೇ ಅನ್ನುವ ವಿಷಯ ಗ್ರಹಿಸುವುದು ಕಷ್ಟವಾಗುತ್ತದೆ. ಬಡವರನ್ನು ಗ್ರಾಹಕರನ್ನಾಗಿ ನೋಡುವುದೂ ಒಂದು ವಿಕಾಸದ ಪರಿಕಲ್ಪನೆಯ ವಿಚಾರಧಾರೆಯ ಸೆಲೆ. ಮ್ಯಾನೇಜ್‍ಮೆಂಟ್ ಗುರು ಎನ್ನಿಸಿಕೊಳ್ಳುವ ಸಿ,ಕೆ.ಪ್ರಹ್ಲಾದ್ ಇದನ್ನು ಪಿರಮಿಡ್ ಕೆಳಸ್ಥರದಲ್ಲಿರುವ ಖಜಾನೆ ಎಂದು ಕರೆದು ಬಡವರನ್ನು ಅನೇಕ ದೊಡ್ಡ ಕಂಪನಿಗಳ ಗ್ರಾಹಕರನ್ನಾಗಿಸುವುದರಲ್ಲಿ ಸಫಲರಾಗಿದ್ದಾರೆ! ಆದರೆ ಲಾಭವನ್ನೂ ಒಳಿತನ್ನೂ ಮಾಡುವುದು ಎಷ್ಟರ ಮಟ್ಟಿಗೆ ಸಾಧ್ಯ?
© ಎಂ.ಎಸ್.ಶ್ರೀರಾಮ್ |
ವಿಷಯ ವೈವಿಧ್ಯ-
ಐಟಿಸಿ,
ಒಳಿತು,
ಫ್ಯಾಬ್ಇಂಡಿಯಾ. ಅರವಿಂದ್ ಐ ಕೇರ್,
ಲಾಭ,
ಶ್ರೀರಾಮ್
| Reactions: |
ಮರೆತೇನೆಂದರು ಮರೆಯಲಿ ಹ್ಯಾಂಗ?
ನಮ್ಮ ದೇಶದಲ್ಲಿ ಮೈಕ್ರೋಫೈನಾನ್ಸ್ ಅಂದಕೂಡಲೇ ಕಾರಣವಿರಲೀ ಇಲ್ಲದಿರಲೀ ಮುಂಚೂಣಿಯಲ್ಲಿ ನಿಲ್ಲುವ ಹೆಸರು ಎಸ್.ಕೆ.ಎಸ್ ಎನ್ನುವ ಸಂಸ್ಥೆಯದ್ದು. ಹಾಗೂ ಅದರ ಸಂಸ್ಥಾಪಕ ಅನ್ನಿಸಿಕೊಳ್ಳುವ ವಿಕ್ರಂ ಆಕುಲಾರ ಹೆಸರು. ಎಸ್.ಕೆ.ಎಸ್ [ಸ್ವಯಂ ಕೃಷಿ ಸಂಘಂ] ಬಗ್ಗೆ ಮೊದಲಿಗೆ ಯೋಚಿಸಿದ್ದು ಅದನ್ನು ಕಾರ್ಯರೂಪಕ್ಕೆ ಇಳಿಸಿದ್ದು ವಿಕ್ರಂ ಅನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಪುಟ್ಟದಾಗಿ ಪ್ರಾರಂಭಿಸಿ ಇಂದು ದೇಶಾದ್ಯಂತ ಹಬ್ಬಿರುವ ಈ ಸಂಸ್ಥೆ ದೇಶದಲ್ಲಿಯೇ ಅತ್ಯಂತ ದೊಡ್ಡ ಮೈಕ್ರೊಫೈನಾನ್ಸ್ ಸಂಸ್ಥೆಯಾಗಿದೆ. ವಿಕ್ರಂಗೂ ಈ ಸಂಸ್ಥೆ ಸಾಕಷ್ಟು ಖ್ಯಾತಿಯನ್ನು ತಂದು ನೀಡಿದೆ. ಅಮೆರಿಕದಿಂದ ಎಲ್ಲವನ್ನೂ ಬಿಟ್ಟು ಭಾರತಕ್ಕೆ ಬಂದು ಬಡವರಿಗೆ ಸೇವೆಯನ್ನೊದಗಿಸುವ ಕೆಲಸ ಮಾಡುತ್ತಿರುವುದಕ್ಕೆ ಟೈಂ ಪತ್ರಿಕೆಯ ನೂರು ಜನರ ಯಾದಿಯಲ್ಲಿ, ವೀಕ್ ಪತ್ರಿಕೆಯ ೨೦ ಮಹತ್ವದ ಭಾರತೀಯರ ಯಾದಿಯಲ್ಲಿ ವಿಕ್ರಂ ಹೆಸರು ದಾಖಲಾದದ್ದಲ್ಲದೇ ದೊಡ್ಡ ವಾರ್ತಾವಾಹಿನಿಗಳಲ್ಲಿ ಆತನ ಸಂದರ್ಶನಗಳೂ ಬಂದಿವೆ. ಆದರೂ ವಿಕ್ರಂ ೧೯೯೭ರಲ್ಲಿ ಪ್ರಾರಂಭಿಸಿ, ಇಷ್ಟೆಲ್ಲಾ ಖ್ಯಾತಿಯನ್ನು ನೀಡಿದ ಸಂಸ್ಥೆಯಲ್ಲಿನ ತಮ್ಮ ಬಹುತೇಕ ಹೂಡಿಕೆಯನ್ನು ಕಳೆದ ವರ್ಷವಷ್ಟೇ ಮಾರಿ ಸಂಸ್ಥೆಯ ದಿನನಿತ್ಯದ ಕಾರ್ಯವನ್ನು ಹೊಸ ಹೂಡಿಕೆದಾರರಿಗೆ ಒಪ್ಪಿಸಿ ಕೈತೊಳೆದುಕೊಂಡರು.
© ಎಂ.ಎಸ್.ಶ್ರೀರಾಮ್ |
ವಿಷಯ ವೈವಿಧ್ಯ-
ಎಸ್.ಕೆ.ಎಸ್,
ಮೈಕ್ರೋಫೈನಾನ್ಸ್,
ವಿಕ್ರಂ ಆಕುಲಾ,
ಶ್ರೀರಾಮ್,
ಸೀತಾರಾಮ್ ರಾವ್
| Reactions: |
ಆತ್ಮಹತ್ಯೆಗಳು: ರೈತರೇ ಏಕೆ?
ಒಂದು ವ್ಯಾಪಾರ ವಿಫಲಗೊಂಡಾಗ ಆ ವ್ಯಾಪಾರಿ ಏನು ಮಾಡಬಹುದು? ಸ್ವಲ್ಪ ಯೋಚಿಸಿ ನೋಡಿದರೆ ನಮಗೆ ಅನೇಕ ಉತ್ತರಗಳು ಕಾಣಸಿಗುತ್ತವೆ. ಆ ವ್ಯಾಪಾರಿ ಹಳೆಯ ವ್ಯಾಪಾರವನ್ನು ಮುಚ್ಚಿ ಹೊಸ ವ್ಯಾಪಾರಕ್ಕೆ ಕಾಲಿಡಬಹುದು, ವ್ಯಾಪಾರವನ್ನೇ ಬಿಟ್ಟು ಹೊಸ ನೌಕರಿಯನ್ನು ಹಿಡಿಯಬಹುದು, ವಿಫಲಗೊಂಡ ವ್ಯಾಪಾರವನ್ನು ಯಾರಿಗಾದರೂ ಮಾರಿ ಸುಮ್ಮನಾಗಬಹುದು, ಆದರೆ ವಿಫಲ ವ್ಯಾಪಾರಿಗಳು ತಮ್ಮ ಪ್ರಾಣ ಕಳೆದುಕೊಳ್ಳುವುದನ್ನು ನಾವು ನೋಡುವುದಿಲ್ಲ. ಎಲ್ಲೋ ಆಗಾಗ ವ್ಯಾಪಾರಿಗಳು ಸಾಲದ ಹೊರೆಯನ್ನು ತಾಳಲಾರದೇ ಪ್ರಾಣ ತೆಗೆದುಕೊಂಡದ್ದನ್ನು ನಾವು ಕಾಣುತ್ತೇವಾದರೂ ಈ ಆತ್ಮಹತ್ಯೆಗಳ ಸಂಖ್ಯೆ ರೈತರ ಆತ್ಮಹತ್ಯೆಗಳ ಸಂಖ್ಯೆಗೆ ಹೋಲಿಸಿದರೆ ತೀರಾ ಕಡಿಮೆಯೇ.
© ಎಂ.ಎಸ್.ಶ್ರೀರಾಮ್ |
© ಎಂ.ಎಸ್.ಶ್ರೀರಾಮ್ |
| Reactions: |
Subscribe to:
Posts (Atom)