ಲೈಫ್ ಸೈಕಲ್



ಬೆಂಗಳೂರಿನ ಜಯನಗರ ಪ್ರಾಂತವನ್ನು ಸೈಕಲ್ ಸ್ನೇಹೀ ಪ್ರಾಂತವೆಂದು ಘೋಷಿಸಿ ರಸ್ತೆಯ ಇಬ್ಬದಿಗಳಲ್ಲೂ ಸೈಕಲ್ ಗುರುತಿನ ಚಿತ್ರವನ್ನು ಹಾಕಿದ್ದಾರೆ. ಭಾಜಪದ ಶಾಸಕರ ಕ್ರಮದಿಂದ ಯಡ್ಯೂರಪ್ಪನವರ ಕೆಜೆಪಿಗೆ ಎಷ್ಟು ಫಾಯಿದೆಯಾಗುವುದೋ ತಿಳಿಯದು. ಚುನಾವಣಾ ನೀತಿಸಂಹಿತೆ ಜಾರಿಯಲ್ಲಿಲ್ಲವಾದ್ದರಿಂದ ಭಾಜಪ ಈ ರೀತಿಯ ಸೈಕಲ್ಲನ್ನು ಹೊಡಯಬಹುದು.

ತಮ್ಮ ಪಕ್ಷದ ಚಿನ್ಹೆಯಾದ ಸೈಕಲ್ಲನ್ನು ಹಿಂದೆ ಶಾಲಾಮಕ್ಕಳಿಗೆ ಮುಫತ್ತಾಗಿ ಹಂಚಿದಕೂಡಲೇ ಚಂದ್ರಬಾಬು ನಾಯುಡು ಚುನಾವಣೆ ಸೋತಿದ್ದರು. ಅದೇ ಕೆಲಸ ಮಾಡಿದ ಜೆಡಿಎಸ್ ನ ನೀತೀಶ್ ಕುಮಾರ್ ಗೆದ್ದಿದ್ದಾರೆ; ಸೈಕಲ್ಲಿನ ಗುರುತನ್ನು ಹೊತ್ತ ಸಮಾಜವಾದಿ ಪಕ್ಷ – ಉತ್ತರಪ್ರದೇಶವನ್ನು ಆಳುತ್ತಿದೆ. ಹೀಗಾಗಿ ಈಚೆಗೆ ಸೈಕಲ್ಲಿನ ನಸೀಬು ಖುಲಾಯಿಸಿದಂತೆನ್ನಿಸುತ್ತಿದೆ. ಇದರಲ್ಲಿ ನಿಜವಾದ ಸೈಕಲ್ಲಿನ ಪಾತ್ರವೆಷ್ಟೋ, ಚಿನ್ಹೆಯ ಪಾತ್ರವೆಷ್ಟೋ, ಸೈಕಲ್ ದಾರಿಯನ್ನು ಮಾಡಿಕೊಟ್ಟದ್ದರಿಂದ ಆಗಬಹುದಾದ ಫಾಯಿದೆಯೆಷ್ಟೋ ಆ ಚಿನ್ಹೆಯನ್ನ ಕರ್ನಾಟಕದಲ್ಲಿ ಪಡೆದದ್ದರಿಂದ ಯಡ್ಯೂರಪ್ಪನವರಿಗೆ ಏನಾಗಬಹುದೋ ತಿಳಿಯದಾಗಿದೆ.


ಮುಂದೆ........



No comments: