Showing posts with label ಐಐಎಂ. Show all posts
Showing posts with label ಐಐಎಂ. Show all posts

ಸೆಪ್ಟೆಂಬರ್ ೫ ರ ವಿಚಾರಗಳು

ಸುಮಾರು ಹದಿನೈದು ವರ್ಷಕಾಲ ಮೇಷ್ಟರ ಕೆಲಸ ಮಾಡಿದಾಗ ಸಹಜವಾಗಿಯೇ ಒಂದು ಸೀನಿಯಾರಿಟಿ ಬಂದುಬಿಡುತ್ತದೆ. ಜೊತೆಗೆ "ನಾನು ಮೇಷ್ಟರ ಕೆಲಸ ಪ್ರಾರಂಭಮಾಡಿದಾಗ ವಿದ್ಯಾರ್ಥಿಗಳು ಎಷ್ಟು ಮರ್ಯಾದೆಯಿಂದ ಇದ್ದರು.. ಈಗ ಕಾಲ ಬದಲಾಗಿದೆ" ಎಂದು ಕರುಬುವ ಪರಿಸ್ಥಿತಿ ಉಂಟಾಗಿದ್ದರೆ ಆ ಮೇಷ್ಟರಿಗೆ ಮಧ್ಯವಯಸ್ಸು ದಾಟುತ್ತಿದೆ ಅನ್ನುವುದು ಖಾತರಿ. ಆದ್ದರಿಂದಲೇ ವಿದ್ಯಾರ್ಥಿಗಳಿಗೂ ಅವರ ಗುರುಗಳಿಗೂ ಇರುವ ಸಂಬಂಧ ಕಾಲಕ್ಕೆ ತಕ್ಕಂತೆ ಬದಲಾಗುತ್ತದೆ ಅನ್ನುವುದು ಎಷ್ಟು ನಿಜವೋ ವ್ಯಕ್ತಿಯ ಸಮಯ, ವಯಸ್ಸಿಗೆ ತಕ್ಕಂತೆ ಬದಲಾಗುತ್ತದೆ ಅನ್ನುವುದೂ ಅಷ್ಟೇ ನಿಜ. ಆದರೂ ನಾವುಗಳು "ಇಂದಿನ ವಿದ್ಯಾರ್ಥಿಗಳೇ ಬೇರೆ" ಎಂದು ಕರುಬುವುದನ್ನು ನಮ್ಮ ಭವ್ಯ ಚರಿತ್ರೆಯಲ್ಲಿ ಬದುಕುವುದನ್ನೂ ಬಿಡುವುದಿಲ್ಲ.





ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು


ಇತರ ಹಿಂದುಳಿದ ಜಾತಿಯವರಿಗೆ ವಿದ್ಯಾಸಂಸ್ಥೆಗಳಲ್ಲಿ ೨೭% ಮೀಸಲಾತಿ ನೀಡುವಂತಹ ಕಾನೂನನ್ನು ಎತ್ತಿಹಿಡಿದ ಸರ್ವೋಚ್ಚ ನ್ಯಾಯಾಲಯದ ತೀರ್ಪು ಬರುತ್ತಿದ್ದಂತೆಯೇ ಸಮಾನತೆ, ಗುಣಮಟ್ಟ ಇತ್ಯಾದಿಯ ಬಗೆಗಿನ ಚರ್ಚೆ ಮತ್ತೆ ಆರಂಭವಾಗಿದೆ. ಈ ಚರ್ಚೆಗೆ ಒಂದು ಸ್ಪಷ್ಟ ಉತ್ತರ ಸಿಗುವುದಾಗಿದ್ದರೆ ಇಷ್ಟು ಗೊಂದಲಮಯ ವಸ್ತುವೇ ಆಗುತ್ತಿರಲ್ಲ. ಇದರಿಂದಾಗಿ ಒ.ಬಿ.ಸಿಗಳಿಗೆ ಒಳಿತಾಗುವುದೇ? ಮೇಲ್ವರ್ಗದವರ ಅವಕಾಶಗಳು ಕಡಿಮೆಯಾಗುವುದೇ? ಎಲ್ಲರನ್ನೂ ಸಮಾನ ಮಾನದಂಡದ ಮೇಲೆ ಅಳೆಯುತ್ತಿದ್ದ ಸಿದ್ಧಾಂತಕ್ಕೆ ಧಕ್ಕೆ ಬಂದಿದೆಯೇ? ಈ ಎಲ್ಲ ಪ್ರಶ್ನೆಗಳೂ ಉದ್ಭವಿಸುತ್ತವೆ. ಜಟಿಲವಾದ ಈ ವಿಷಯದ ನಿರಚನೆ ಅಷ್ಟೇ ಜಟಿಲವಾದದ್ದು.
ಸರ್ವರಿಗೂ ಸಮಬಾಳು ಅನ್ನುವ ಮಾತು ಎಂದಿಗಾದರೂ ನಿಜವಾಗಲು ಸಾಧ್ಯವೇ?