ಕಳೆದ ವರ್ಷ ನಾವುಗಳು ಕ್ಯಾತದೇವರಗುಡಿಯ ಅರಣ್ಯದ ಪ್ರಾಂತಕ್ಕೆ ಪ್ರವಾಸ ಹೋದಾಗ ಜಂಗಲ್ ಲಾಡ್ಜಸ್‍ನ ಗೈಡ್ ಕಂ ಡ್ರೈವರ್ ಹರ್ ಬಹದ್ದೂರ್ ಥಾಪಾ ಜೊತೆ ಮಾತು ಬೆಳೆಸಿದ್ದೆ. ಥಾಪಾ ಹಿಮಾಚಲ ಪ್ರದೇಶದವನು, ಭಾರತೀಯ ಸೇನೆಯಲ್ಲಿದ್ದು ಯಾವುದೋ ಲಕ್-ಬೈ-ಚಾನ್ಸ್ ಆಗಿ ಇಲ್ಲಿ ಕೆಲಸ ಸಿಕ್ಕಿತ್ತಂತೆ. ದೂರದ ಹಿಮಾಚಲಕ್ಕೆ ಅವನು ಹಣ ಪಾವತಿಸುವುದು ಹೇಗೆ ಅನ್ನುವ ಕುತೂಹಲ ನನ್ನಲ್ಲಿತ್ತು. ವಲೆಸೆ ಹೋಗುವ ಕೆಲಸಗಾರರಿಗೆ ಇದು ದೊಡ್ಡ ಸವಾಲೆನ್ನುವುದನ್ನು ನಾವುಗಳು ಅನೇಕ ಅಧ್ಯಯನಗಳಲ್ಲಿ ಕಂಡುಕೊಂಡಿದ್ದೆವು. ಸಾಮಾನ್ಯವಾಗಿ ವಲೆಸೆ ಹೋಗುವ ಕೆಲಸಗಾರರು ತಮ್ಮ ಮುಕದ್ದಂ [ಮೇಸ್ತ್ರಿಗಳ] ಮೂಲಕವೇ ಎಲ್ಲ ವ್ಯವಹಾರವನ್ನೂ ಮಾಡುತ್ತಾರೆ. ಆದರೆ ಮುಕದ್ದಂ ಇಲ್ಲದ ಕೆಲಸದಲ್ಲಿರುವ ಈತ ಕರ್ನಾಟಕದಲ್ಲಿ ಸಂಪಾದಿಸುವ ಹಣವನ್ನು ಹಿಮಾಚಲಕ್ಕೆ ತಲುಪಿಸುವುದೂ ಅಥವಾ ಸೂರತ್‍ನ ವಜ್ರದ ಯೂನಿಟ್ಟುಗಳಲ್ಲಿ ಕೆಲಸ ಮಾಡುವ ಒಡಿಯಾ ಕೆಲಸಗಾರರು ಒರಿಸ್ಸಾಗೆ ಹಣ ತಲುಪಿಸುವುದೂ ಒಂದು ಸವಾಲೇ ಆಗಿತ್ತು. ಕಾರಣಗಳು ಅನೇಕ.
ಗೋಪಾಲಕೃಷ್ಣ ಕುಂಟಿನಿಯ ಕಥೆಗಳಿಗೆ ಮುನ್ನುಡಿ
-
ಹೊಸದಾಗಿ ಬರುತ್ತಿರುವ ಕೃತಿಯನ್ನು ಸ್ವಾಗತಿಸುವಾಗ ಅದಕ್ಕೊಂದು ಹಿನ್ನೆಲೆ – ಯಾವ ಪರಂಪರೆಗೆ
ಕಥೆಗಳು ಸೇರುತ್ತವೆ, ಹಾಗೂ ಕಥನ ಜಗತ್ತನ್ನು ಇದು ಹೇಗೆ ಪ್ರವೇಶಿಸುತ್ತದೆ ಎಂದು
ಗಮನಿಸುವುದು ...
6 years ago
No comments:
Post a Comment