ಅಭಿವೃದ್ಧಿಯ ಮಾತನಾಡುವಾಗಲೆಲ್ಲಾ ಬಡತನದ ರೇಖೆಯ ಮಾತು ಸಹಜವಾಗಿ ಬರುತ್ತದೆ. ಬಡತನದ ರೇಖೆಯ ಮೇಲಿರುವ ಜನಸಂಖ್ಯೆ ಪ್ರಮಾಣ ಅಭಿವೃದ್ಧಿಯ ಅನೇಕ ಮಾಪಕಗಳಲ್ಲಿ ಒಂದು. ಭಾರತದಲ್ಲಿ ಈ ರೇಖೆಯನ್ನು ನಿರ್ಧರಿಸಲು ಕ್ಯಾಲೋರಿಫಿಕ್ ವ್ಯಾಲ್ಯೂ ಆಧಾರದ ಮೇಲೆ [ಅಂದರೆ ಇಂತಿಷ್ಟು ಶಕ್ತಿಯನ್ನು ಆರ್ಜಿಸಲು ಬೇಕಾದ ಆಹಾರವನ್ನು ಕೊಳ್ಳಲು ಆಗುವ ಖರ್ಚಿನ ಆಧಾರದ ಮೇಲೆ] ವಾರ್ಷಿಕ ಆದಾಯವನ್ನು ನಿಗದಿ ಮಾಡಲಾಗಿದೆ. ಪ್ರತೀ ವರ್ಷ ಸರಕಾರ ಇಂತಿಷ್ಟು ಮಂದಿ ಬಡತನದ ರೇಖೆಯನ್ನು ಉಲ್ಲಂಘಿಸಿದ್ದಾರೆಂದು ಘೋಷಿಸಿ ತನ್ನ ಬೆನ್ನನ್ನು ತಟ್ಟಿಕೊಳ್ಳುತ್ತದೆ. ಸರಕಾರದ ಯಾವುದೇ ಅಂಕಿ ಅಂಶಗಳನ್ನು ಅನುಮಾನದಿಂದ ನೋಡುವ ಜನ ಈ ಮಾಪನವನ್ನು ಸಹಜವಾಗಿ ಪ್ರಶ್ನಿಸುತ್ತಾರೆ. ವಿಶ್ವದಾದ್ಯಂತ ಬಡತನವನ್ನು ಅಳೆಯಲು [ಸ್ಥಳೀಯ ಹಣದ ಖರೀದಿಯ ಶಕ್ತಿಯನುಸಾರ] ದಿನಕ್ಕೊಂದು ಡಾಲರ್ ಸಮಾನವಾದ ಆದಾಯವನ್ನು ಮಾಪಕವನ್ನಾಗಿ ಇಟ್ಟುಕೊಳ್ಳಲಾಗಿದೆ. ಈಗೀಗ ಇದನ್ನು ಎರಡು ಹಂತಗಳಲ್ಲಿ ಅಳೆಯುವುದೂ ಉಂಟು. ದಿನಕ್ಕೊಂದು ಡಾಲರ್‌ಗಿಂತ ಕಡಿಮೆ ಆರ್ಜಿಸುವ ಅತೀ-ಬಡವರು ಹಾಗೂ ಎರಡು ಡಾಲರ್‌ವರೆಗೆ ಆದಾಯವಿರುವ ಬಡವರು.
ಗೋಪಾಲಕೃಷ್ಣ ಕುಂಟಿನಿಯ ಕಥೆಗಳಿಗೆ ಮುನ್ನುಡಿ
-
ಹೊಸದಾಗಿ ಬರುತ್ತಿರುವ ಕೃತಿಯನ್ನು ಸ್ವಾಗತಿಸುವಾಗ ಅದಕ್ಕೊಂದು ಹಿನ್ನೆಲೆ – ಯಾವ ಪರಂಪರೆಗೆ
ಕಥೆಗಳು ಸೇರುತ್ತವೆ, ಹಾಗೂ ಕಥನ ಜಗತ್ತನ್ನು ಇದು ಹೇಗೆ ಪ್ರವೇಶಿಸುತ್ತದೆ ಎಂದು
ಗಮನಿಸುವುದು ...
6 years ago
No comments:
Post a Comment