ಸಮತಾವಾದ ಮತ್ತು ಬೆಳವಣಿಗೆ: ಯಾವುದು ಹಿತ?




ಈಚಿನ ರಾಜಕೀಯ ಬೆಳವಣಿಗೆಯ ನಡುವೆ ಗರಮಾಗರಂ ಚರ್ಚೆಗೆ ಒಳಗಾಗಿರುವುದು ಅಮಾರ್ತ್ಯ ಸೇನ್ ಮತ್ತು ಜಗದೀಶ್ ಭಗವತಿಯವರ ಅರ್ಥಶಾಸ್ತ್ರದ ಜಟಾಪಟಿ. ಇದು ದೇಶದ ಪ್ರಗತಿಯ ಹಾದಿಯನ್ನು ಆರಿಸಿಕೊಳ್ಳುವ ಜಟಾಪಟಿಯೂ ಹೌದು. ಆದರೆ ದುರಂತವೆಂದರೆ ಅದನ್ನು ರಾಜಕೀಯ ಪಕ್ಷಗಳ ಪರ-ವಿರೋಧವಾಗಿ ನಿಲ್ಲಿಸಿ ಕಪ್ಪು-ಬಿಳುಪಿನಲ್ಲಿ ಬಣ್ಣಿಸುವ ಪ್ರಕ್ರಿಯೆ ಪ್ರಾರಂಭವಾಗಿಬಿಟ್ಟಿದೆ. ಯಾರು ಮಾರುಕಟ್ಟೆ ಪರ, ಯಾರು ವಿರೋಧಿಗಳು, ಯಾರು ದೇಶವನ್ನು ಲೈಸೆನ್ಸ್ ರಾಜ್ ಕಡೆಗೆ ಹಿನ್ನಡೆಸುತ್ತಿದ್ದಾರೆ ಎಂದೆಲ್ಲಾ ಚರ್ಚೆಗಳು ಬಂದಿವೆ. ಆದರೆ ಈ ರೀತಿಯ ಚರ್ಚೆಗಳು ಅರ್ಥಶಾಸ್ತ್ರದ ದಿಗ್ಗಜರಾದ ಇಬ್ಬರಿಗೂ ಮಾಡುತ್ತಿರುವ ಅನ್ಯಾಯವೇ ಆಗಿದೆ. ಮಾರುಕಟ್ಟೆಯನ್ನು ನಂಬುವವರೂ ಬಡತನದ ಉಚ್ಚಾಟನೆಯ ಮಾರ್ಗಗಳ ಬಗ್ಗೆ ಯೋಚಿಸುತ್ತಾರೆ – ಹಾಗೂ ಅವರನ್ನು ಅರ್ಥವ್ಯವಸ್ಥೆಯಲ್ಲಿ ಒಳಗೊಳ್ಳುವ ರೀತಿಯ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಾರೆ. ಮಾರುಕಟ್ಟೆಯೇ ಆರಾಧ್ಯ ದೇವರೆಂಬ ನಂಬಿಕೆಯನ್ನು ಪ್ರಶ್ನಿಸುವವರೂ ಮಾರುಕಟ್ಟೆಯ ಚೌಕಟ್ಟನ್ನು ಗುರುತಿಸಿ ಅದರಲ್ಲಿ ನಡೆಯಬೇಕಾದ ಸುಧಾರಣೆಯನ್ನು ಚರ್ಚಿಸುತ್ತಾರೆಯೇ ಹೊರತು 
ಮಾರುಕಟ್ಟೆಯನ್ನು ಅಲ್ಲಗಳೆಯುವುದಿಲ್ಲ.

ಮುಂದೆ.......