Showing posts with label ಗುಜರಾತ್. Show all posts
Showing posts with label ಗುಜರಾತ್. Show all posts

ವಾಡಾಗಳ ಅರಗಿನರಮನೆ

ನಿರುನಾ ಗ್ರಾಮದಲ್ಲಿ ಮಾತ್ರವಲ್ಲ ಇಡೀ ಕಛ್ ಪ್ರಾಂತದಲ್ಲೇ ನಿಜಕ್ಕೂ ಪ್ರತಿಭಾವಂತ ಕಲಾವಿದರಿದ್ದಾರೆ. ಆದರೆ ಈ ಬಾರಿ ನಾವು ರೋಗನ್ ಕಲೆಯಿಂದ ಮುಂದಕ್ಕೆ ಹೋಗಿ ಮರ ಮತ್ತು ಅರಗಿನ ಕಲಸ ಮಾಡುವ ’ವಾಡಾ’ಬುಡಕಟ್ಟಿನ ಜನಗಳ ಬಗ್ಗೆ ಯೋಚಿಸೋಣ. ವಾಡಾ ಬುಡಕಟ್ಟಿನವರು ಮೂಲಭೂತವಾಗಿ ಅಲೆಮಾರಿಗಳು, ಅರಣ್ಯ ಪ್ರಾಂತದಲ್ಲಿ ತಿರುಗಾಡುತ್ತಿರುವ ಈ ಬುಡಕಟ್ಟಿನ ಜನಾಂಗಕ್ಕೆ ಒಂದೇ ಜಾಗದಲ್ಲಿದ್ದು ಕೆಲಸ ಮಾಡುವುದು ತುಸು ಮುಜುಗರದ ಮಾತೇ. ಆದರೆ ಅರಣ್ಯ ಪ್ರದೇಶದಲ್ಲಿರುವುದರಿಂದ ಮರಗಳ ಬಗೆಗಿನ ಅವರ ಜ್ಞಾನ ಅದ್ಭುತವಾದದ್ದು. ಅವರ ಕರಕುಶಲತೆಯನ್ನು ನೋಡಿಯೇ ನಂಬಬೇಕು. ಆದರೆ ಕಲಾವಿದರಿಗೆ ತಮ್ಮ ಕಲೆಯ ಆಧಾರವಾಗಿಯೇ ಜೀವನ ಹೊರೆಯುವುದು ಸಾಧ್ಯವಿಲ್ಲ ಎನ್ನುವುದನ್ನು ನಿರೂಪಿಸಲೋ ಎಂಬಂತೆ ಇವರುಗಳು ಸೈಡ್ ಬಿಜನೆಸ್ ಆಗಿ ಸಾರಾಯಿ ತಯಾರಿಸುವ ಕೆಲಸವನ್ನೂ ಮಾಡುತ್ತಾರೆ.







ರೋಗನ್ ಕಲೆ, ಎಷ್ಟು ಬೆಲೆ?

ಗುಜರಾತಿನ ಕಛ್ ಪ್ರಾಂತದಲ್ಲಿ ಆದ ೨೦೦೧ರ ಭೂಕಂಪದ ಕಂಪನಗಳು ಈಗ್ಗೆ ಕಡಿಮೆಯಾಗುತ್ತಾ ಬಂದಿದೆಯೇನೋ. ಭೂಕಂಪವಾದ ನಂತರ ವಿಶ್ವದ ವಿವಿಧೆಡೆಗಳಿಂದ ಕಛ್ ಪ್ರಾಂತಕ್ಕೆ ಅನೇಕ ರೀತಿಯ ಅನುದಾನಗಳು ಬಂದುವು. ನಾನಾ ರೀತಿಯ ಸಂಸ್ಥೆಗಳು ಭೂಕಂಪದ ತಕ್ಷಣದ ದಿನಗಳಲ್ಲಿ ಆ ಜಿಲ್ಲೆಗೆ ಬಂದು ಗ್ರಾಮಗಳನ್ನು ದತ್ತು ತೆಗೆದು ಆ ಪ್ರಾಂತದ ಪುನರ್ನಿರ್ಮಾಣಕ್ಕೆ ಕೈಕೈ ಕೂಡಿಸಿದುವು. ಆದರೆ ಎಂಟು ವರ್ಷಗಳ ನಂತರ ಆ ಪ್ರಾಂತದ ಜನ ಹೇಗೆ ಜೀವಿಸುತ್ತಿದ್ದಾರೆ? ಭೂಕಂಪದಿಂದ ತತ್ತರಿಸಿದ ಹಲವು ಸಮುದಾಯಗಳು ಈಗ ಜೀವನ ಹೇಗೆ ನಡೆಸುತ್ತಿವೆ? ಈ ಎಲ್ಲ ಸಹಾಯ ಮತ್ತು ಒಳ್ಳೆಯತನದ ಫಲಿತವಾಗಿ ಏನಾದರೂ ಆಗಿದೆಯೇ ಅನ್ನುವುದು ಕುತೂಹಲದ ಮಾತು.






ಕಂದೀಲಿನ ಮೇಲೆ ಧೂಳು!

ಗುಜರಾತ್ ಸರಕಾರ ವಿಕಾಸದ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ. ಅದರ ಬಗ್ಗೆ ಹೆಚ್ಚಿನ ಚರ್ಚೆ ರಾಜ್ಯದ ಆಚೆ ಹೆಚ್ಚಾಗಿ ನಡೆಯುವುದಿಲ್ಲ. ಗುಜರಾತಿನ ಬಗ್ಗೆ ಹೊರಗೆ ಚರ್ಚೆ ನಡೆಯುವಾಗ ಎರಡು ಮುಖ್ಯ ವಿಚಾರಗಳು ಚರ್ಚಿತಗೊಳ್ಳುತ್ತವೆ. ಮೊದಲನೆಯ ಮತ್ತು ಅತಿ ಮುಖ್ಯ ವಿಷಯ ಗೋಧ್ರಾ ಮತ್ತು ತದನಂತರದ ಹತ್ಯಾಕಾಂಡ. ಆ ಬಗ್ಗೆ, ಅದರಲ್ಲಿ ಸರಕಾರದ ಪಾತ್ರದ ಬಗ್ಗೆ, ಪೋಲೀಸರ ಪಾತ್ರದ ಬಗ್ಗೆ ಎಷ್ಟೋ ಚರ್ಚೆ ನಡೆದಿದೆ. ಅದೇ ಸಮಯಕ್ಕೆ ಗುಜರಾತಿನಲ್ಲಿನ ವಿಕಾಸದ ಬಗೆಗಿನ ವಿಚಾರಗಳು ಹೊರಕ್ಕೆ ಬರುವುದೇ ಇಲ್ಲ. ಇಲ್ಲಿ ಜನ ಸುಖವಾಗಿದ್ದಾರೆಯೇ? ಒಂದು ಕೋಮಿನವರು ಭಯಭೀತಿಯಿಂದ ಜೀವಿಸುತ್ತಿದ್ದಾರೆಯೇ? ಇಲ್ಲಿ ರಾಕ್ಷಸತ್ವ ಕಾಣಿಸುತ್ತದೆಯೇ? ಈ ಎಲ್ಲಕ್ಕೂ ಸರಳವಾದ ಉತ್ತರಗಳನ್ನು ಕೊಡುವುದಕ್ಕೆ ಸಾಧ್ಯವಿಲ್ಲ. ಗುಜರಾತಿನ ವಿಷಯಕ್ಕೆ ಬಂದಾಗ ಚರ್ಚೆಗೊಳಗಾಗುವ ಮತ್ತೊಂದು ವಿಚಾರ ನರ್ಮದಾ, ಅಣೆಕಟ್ಟು, ನೀರು, ಮೇಧಾ ಮತ್ತು ಅದಕ್ಕೆ ಸಂಬಂಧಿಸಿದ ವಿವಾದದ್ದು.




ಇಳಾಬೇನ್ ಮತ್ತು ಸೇವಾ: ಒಂದು ಖಾಸಗೀ ಪ್ರಬಂಧ


ಗುಜರಾತಿನಲ್ಲಿ ಜೀವನದ ಅರ್ಧಭಾಗದಷ್ಟು ಕಳೆದಿರುವ ನನ್ನಂಥವರು ಆ ರಾಜ್ಯದಲ್ಲೇ ಇದ್ದು, ಜನ ಮತ್ತು ದೇಶಕ್ಕಾಗಿ ಅಪ್ರತಿಮ ಕೆಲಸ ಮಾಡುತ್ತಿರುವ ತುಂಬಾ ಭಿನ್ನವಾಗಿರುವ ಇಬ್ಬರನ್ನು ಬೆರಗಿನಿಂದ, ಗೌರವದಿಂದ ಕಾಣದೇ, ಅವರಿಂದ ಪ್ರಭಾವಿತರಾಗದೇ ಇರುವುದು ಕಷ್ಟದ ಮಾತು. ಹಾಲು ಉತ್ಪಾದಕರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತಂದ ಕುರಿಯನ್ ಬಗ್ಗೆ ನಾನು ಈಗಾಗಲೇ ಬರೆದಿದ್ದೇನೆ. ಕುರಿಯನ್ ಅವರ ಕೆಲಸ ಹೆಚ್ಚಿನಂಶ ಗ್ರಾಮ್ಯ ಪ್ರದೇಶಕ್ಕೆ ಸೀಮಿತವಾಗಿತ್ತು. ಪರಿಚಯದವರಿಂದ ಇಳಾಬೇನ್ ಎಂದು ಪ್ರೀತಿಯಿಂದ ಕರೆಸಿಕೊಳ್ಳಲ್ಪಡುವ ಇಳಾ ಭಟ್ ಕುರಿಯನ್‌ಗಿಂತ ತುಂಬಾ ಭಿನ್ನವಾಗಿದ್ದಾರೆ. ಆಕೆ ಹೆಚ್ಚಾಗಿ ಎಲ್ಲೂ ಕಾಣಿಸಿಕೊಳ್ಳುವುದಿಲ್ಲ. ಕಾಣಿಸಿಕೊಂಡರೂ ಧ್ವನಿಯೇರಿಸಿ ಮಾತನಾಡುವುದಿಲ್ಲ. ಮೇಜು ಗುದ್ದಿ ಕೂಗಾಡುವುದಿಲ್ಲ. ಹಾಗೆ ನೋಡಿದರೆ ಆಕೆ ಒಂದು ಸೊಳ್ಳೆಗೂ ಹಾನಿಯುಂಟುಮಾಡಬಹುದು ಅನ್ನಿಸುವುದಿಲ್ಲ. ಆಕೆಯ ಆಕಾರ ಗಾಂಧೀಜಿಯಂತೆ ಪುಟ್ಟದು, ಮಾತು ಮೃದು. ಆದರೆ ಆಕೆ ಕೈಗೊಂಡ ಯಾವುದೇ ಕೆಲಸವನ್ನು ಹಿಡಿದು ಹೊರಟಾಗ ಆ ಕೆಲಸಕ್ಕೆ ಆಕೆ ಹಾಕಿ ಹಿಡಿವ ಪಟ್ಟು ಗಟ್ಟಿಯಾದದ್ದು, ಉಕ್ಕಿನಂಥದ್ದು. ಜೀವಮಾನವಿಡೀ ಗುಜರಾತಿನ ಬಡ ಹೆಣ್ಣುಮಕ್ಕಳ ಸಮುದಾಯದ ಪರವಾಗಿ ಎಡಬಿಡದೇ ಕೆಲಸಮಾಡಿದ್ದಾರೆ.


ಮುಂದೆ...