೧
`ಚರಿತ್ರೆಯಿಂದ ಪಾಠ ಕಲಿಯದವರು ಅದನ್ನು ಪುನಃ ಜೀವಿಸುವ ಶಾಪ ಪಡೆಯುತ್ತಾರೆ' ಎಂದು ಹೇಳಿದ್ದು ತತ್ವಜ್ಞಾನಿ ಜಾರ್ಜ್ ಸಾಂತಾಯನ. ಸಾಂತಾಯನನ ಮಾತಿನ ಸತ್ಯಾಸತ್ಯತೆ ಸ್ವಲ್ಪ ಕುತೂಹಲದ ವಿಷಯ.
ಚರಿತ್ರೆ:
`ಯಾವುದೇ ಜನಾಂಗದಲ್ಲಿ ಕೋಮುಸೌಹಾರ್ದತೆಯನ್ನು ಮುಂದುವರೆಸಿ ಬರಲು ಕೆಲವು ವಿಶೇಷ ಕ್ರಮ ಕೈಗೊಳ್ಳುನ ಅಗತ್ಯ ಬೀಳುತ್ತಿತ್ತು. ಇಂಥ ಒಂದು ಸಂದರ್ಭದಲ್ಲಿ ನಿಜಾಮನೇ ಸ್ವತಃ ಹೀಗೊಂದು ಕ್ರಮ ಕೈಗೊಳ್ಳುವ ಪರಿಸ್ಥಿತಿ ಒದಗಿ ಬಂತು (ನಿಜಾಮ: ಮಹಬೂಬ್ ಅಲಿ ಪಾಷಾ - ೧೮೬೬-೧೯೧೧). ಅನೇಕ ಭಾರತೀಯ ಹಬ್ಬಗಳು ಚಾಂದ್ರಮಾನ ಪಂಚಾಂಗಕ್ಕನುಸಾರವಾಗಿ, ವರ್ಷದ ಬೇರೆ ಬೇರೆ ತಿಂಗಳುಗಳಲ್ಲಿ ಘಟಿಸುವುದುಂಟು. ಹೀಗಾಗಿ ಎರಡು ಭಿನ್ನ ಹಬ್ಬಗಳು ಒಂದೇ ದಿನ ಬೀಳುವ ಸಾಧ್ಯತೆಯೂ ಉಂಟು. ಇಂಥ ಒಂದು ಕಾಕತಾಳೀಯ ಶಿಯಾ ಮುಸಲ್ಮಾನರ ದುಃಖಭರಿತ ಮೊಹರಂ ತಿಂಗಳಿಗೂ, ಸಂತೋಷದಿಂದ ಬಣ್ಣ ಎರಚುವ ಹೋಳಿ ಹುಣ್ಣಿಮೆಗೂ ನಡುವೆ ಉಂಟಾಯಿತು.'
ಮುಂದೆ...